ಕನ್ನಡತಿ ಧಾರವಾಹಿಯ ರಂಜನಿ ನಾಯಕಿಯಾಗಿ ಅಭಿನಯಿಸಿರುವ ಟಕ್ಕರ್ ಸಿನಿಮಾ ರಿಲೀಸ್ ವಿಚಾರದಲ್ಲಿ ಸ್ವಲ್ವಗೊಂದಲದಲ್ಲಿತ್ತು.ಆದರೆ ಈಗ ಈ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರರಂಗ ಸಜ್ಜಾಗಿದೆ. ಮನೋಜ್ ಕುಮಾರ್ ಹಾಗೂ ರಂಜನಿ ರಾಘವನ್ ನಟಿಸಿರುವ ಈ ಚಿತ್ರವನ್ನು ನಾಗೇಶ್ ಕೋಗಿಲು ನಿರ್ಮಿಸಿದ್ದಾರೆ. ಚಿತ್ರವನ್ನು ವಿ.ರಘು ಶಾಸ್ತ್ರಿ ನಿರ್ದೇಶಿಸಿದ್ದಾರೆ. ಚಿತ್ರದ ಒಂದು ಹಾಡನ್ನು ಮಲೇಶಿಯಾದಲ್ಲಿ ಚಿತ್ರೀಕರಿಸಿದ್ದು ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರಿನಲ್ಲಿ ಶೂಟ್ ಮಾಡಲಾಗಿದೆ.
ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಸಂಗೀತ, ಡಾ. ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಡಿಫರೆಂಟ್ ಡ್ಯಾನಿ ಸಾಹಸ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಗುರುರಾಜ್ ದೇಸಾಯಿ ಅವರ ಸಂಭಾಷಣೆ ಚಿತ್ರಕ್ಕಿದೆ. ಮನೋಜ್ ಕುಮಾರ್, ರಂಜನಿ ರಾಘವನ್, ಕೆ.ಎಸ್. ಶ್ರೀಧರ್, ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಖ್ಯಾತಿಯ ಸೌರವ್ ಲೋಕಿ, ಸಾಧು ಕೋಕಿಲಾ, ಲಕ್ಷ್ಮಣ್ ಶಿವಶಂಕರ್, ಅಶ್ವಿನ್ ಹಾಸನ್ ಸೇರಿದಂತೆ ಅನೇಕರು ನಟಿಸಿದ್ದಾರೆ.