ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಜಾಗೃತಿ ಸಮಾರಂಭವನ್ನು ಇದೇ ಏಪ್ರಿಲ್ 04ರಂದು ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಚಿಕ್ಕಮಠ ಹೇಳಿದರು.
ಜೊತೆಗೆ ಮಾತನಾಡಿದ ಅವರು, ಪ್ರಾತಃಕಾಲ 06 ಗಂಟೆಗೆ ಪಂಚಗ್ರಹ ಹಿರೇಮಠದ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ ಅಷ್ಟೋತ್ತರ ಪೂಜಾ, ಬೆಳಿಗ್ಗೆ 08 ಗಂಟೆಗೆ ಶಿವದಿಕ್ಷಾ-ಅಯ್ಯಾಚಾರ ಸಂಸ್ಕಾರ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಬೆಳಿಗ್ಗೆ 10 ಗಂಟೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನೂ ಅಡ್ಡಪಲ್ಲಕ್ಕಿ ಉತ್ಸವಕ್ಕೆ ಉದ್ಘಾಟಕರಾಗಿ ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಾಸಕಿ ಕುಸುಮಾವತಿ ಶಿವಳ್ಳಿ, ಪಾಲಿಕೆ ಸದಸ್ಯೆ ಸುಮಿತ್ರಮ್ಮ ಶಿವಾನಂದ ಗುಂಜಾಳ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.ಅಂದು ಸಂಜೆ ನಡೆಯಲಿರುವ ಧರ್ಮಜಾಗೃತಿ ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆರವೇರಿಸುವರು. ಅಲ್ಲದೇ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು ಆಗಮಿಸಲಿದ್ದಾರೆ ಎಂದರು.