ವಸತಿ ಕಟ್ಟಡದಲ್ಲಿ ಭಾನುವಾರ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿದ ಕಾರಣವಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಥಾಣೆಯ ನೌಪಾದ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ ಎಂದರು.
ಇನ್ನೂ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರ ತೆಗೆದಿದ್ದು, ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಇದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಥಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada