ಇಂದು ಸಂಜೆ 4 ಘಂಟೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಾಕಷ್ವು ಗಣ್ಯರು ಭಾಗಿಯಾಗಲಿದ್ದಾರೆ. ರಾಜ್ಯದ ಎರಡು ಪ್ರಮುಖ ಪೀಠದ ಪೀಠಾಧಿಪತಿಗಳು ಕೂಡ ಭಾಗಿಯಾಗುತ್ತಿದ್ದಾರೆ. ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಯೋಗಿ ಆದಿತ್ಯನಾಥ್ ಗೆ ಆಶೀರ್ವಾದ ನೀಡಲಿದ್ದಾರೆ.ಯೋಗಿ ಆದಿತ್ಯನಾಥ್ ರನ್ನು ಹತ್ತಿದಿಂದ ಬಲವರಾದ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ನಿರ್ಮಲಾನಂದ ಶ್ರೀ ಗಳು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಮಹಾಪೀಠಗಳ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಮಾತ್ರವಲ್ಲದೇ ಯೋಗಿ ಆದಿತ್ಯನಾಥ್ ರ ಹೆಸರಿನಲ್ಲಿ ಪೂಜೆಯನ್ನು ಮಾಡಿಸಲಿದ್ದಾರೆ. ಮಠದಲ್ಲಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದದ ಸಮೇತ ವಸ್ತ್ರವನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಇತ್ತ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥರು ಉಡುಪಿಯ ಶ್ರೀಕೃಷ್ಣನ ಮೃತ್ತಿಕೆ, ಫಲಪುಷ್ಪ, ಮಂತ್ರಾಕ್ಷತೆಯನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.
ಇನ್ನು ವಿಶ್ವಪ್ರಸನ್ನ ತೀರ್ಥರು, ಅಯೋಧ್ಯೆಯ ಶ್ರೀ ರಾಮಮಂದಿರ ಟ್ರಸ್ವ್ ನ ಸದಸ್ಯರಾಗಿಯೂ ಇರುವ ಕಾರಣ, ಯೋಗಿ ಆದಿತ್ಯನಾಥ್ ಶ್ರೀಗಳಿಗೆ ವಿಶೇಷ ಆಮಂತ್ರಣ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಇಂದು ನಡೆಯುವ ಯೋಗಿ ಆದಿತ್ಯನಾಥ್ ರಿಗೆ ಸತತ ಎರಡನೇ ಬಾರಿ ದೇಶದ ಅತಿದೊಡ್ಡ ರಾಜ್ಯದ ಬಿಜೆಪಿ ನಾಯಕತ್ವ ಸಿಕ್ಕಿರುವುದು ಎನ್ನಬಹುದಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada