ಉತ್ತರ ಪ್ರದೇಶ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಇತಿಹಾಸ ಸೃಷ್ವಿಸಿದ ಯೋಗಿ ಆದಿತ್ಯನಾಥ್ ಇಂದು ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಅವರ ಜೊತೆಗೆ ಇಬ್ಬರು ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಮೊದಲ ಅವಧಿಯಲ್ಲಿ ಕಾನೂನು ಸಚಿವರಾಗಿದ್ದ ಬ್ರಜೇಶ್ ಪಾಠಕ್ ಅವರು ಈ ಬಾರಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಬಿಎಸ್ಪಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಇವರು ಬ್ರಾಹ್ಮಣ ಸಮುದಾಯದವರಾಗಿದ್ದಾರೆ. ಲಕ್ನೋದ ಶಹೀದ್ ಪಥ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ಭಾರೀ ಜನಸ್ತೋಮದ ನಡುವೆ ಯೋಗಿ ಎರಡನೇ ಬಾರಿ ರಾಜ್ಯವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಹಾಜರಿದ್ದರು.
ಯೋಗಿ ಪ್ರಮಾಣವಚನಕ್ಕೆ ಬಾಲಿವುಡ್ ಸ್ಟಾರ್ಗಳಿಗೂ ಆಹ್ವಾನ ನೀಡಲಾಗಿತ್ತು. ಅಕ್ಷಯ್ ಕುಮಾರ್, ಕಂಗನಾ ರನೌತ್ ಮತ್ತು ಬೋನಿ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಮೆಗಾ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನವನ್ನು ಪಡೆದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada