ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

ಸೂರ್ಯ – ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ .

ಖ್ಯಾತ ನಟ ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ “ಗರಡಿ” ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ.

Tue Mar 29 , 2022
ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ “ಅಂತು ಇಂತು” ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ ರಾಜ್, ಬೃಂದಾ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಲಿದ್ದಾರೆ. ದಿಗಂತ್ ಈ ಚಿತ್ರದ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: